Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:30 - ಪರಿಶುದ್ದ ಬೈಬಲ್‌

30 ಆತನು (ಯೇಸು) ವೃದ್ಧಿಯಾಗಬೇಕು ಮತ್ತು ನಾನು ಕಡಿಮೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನು ವೃದ್ಧಿಯಾಗಬೇಕು; ನಾನು ಕಡಿಮೆಯಾಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 “ತೊ ಮೊಟೊ ಹೊವ್ಕ್ ಪಾಜೆ, ಮಿಯಾ ಬಾರಿಕ್ ಹೊವ್ಕ್ ಪಾಜೆ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:30
15 ತಿಳಿವುಗಳ ಹೋಲಿಕೆ  

ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


“ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು