ಯೋಹಾನ 3:31 - ಪರಿಶುದ್ದ ಬೈಬಲ್31 “ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಜೊ ಕೊನ್ ವೈನಾ ಯೆತಾ ತೊ ಸಗ್ಳ್ಯಾಂಚ್ಯಾನ್ಕಿ ಮೊಟೊ, ಜೊ ಕೊನ್ ಹ್ಯಾ ಜಿಮ್ನಿಕ್ ಸಮಂದ್ ಪಡಲ್ಲೊ ಹಾಯ್, ತೊ ಹ್ಯಾ ಜಿಮ್ನಿ ವೈಲೊಚ್, ಅನಿ ಹ್ಯಾ ಜಿಮ್ನಿ ವೈಲ್ಯಾ ವಿಶಯಾತುಚ್ ತೊ ಬೊಲ್ತಾ, ಖರೆ ಜೊ ಸರ್ಗಾವೈನಾ, ಯೆಲಾ ತೊ ಸಗ್ಳ್ಯಾಂಚ್ಯಾನ್ಕಿ ವೈಲೊ ಅಧ್ಯಾಯವನ್ನು ನೋಡಿ |