ಯೋಹಾನ 3:33 - ಪರಿಶುದ್ದ ಬೈಬಲ್33 ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಖರೆ ಜೆ ಕೊನ್ ತೆಚಿ ಸಾಕ್ಷಿ ಸ್ವಿಕಾರ್ ಕರ್‍ತಾ ತೊ ಅಶೆಚ್ ಕರುನ್ ದೆವ್ ಕರೊ ಮನುನ್ ಸಾಬಿತ್ ಕರ್‍ತಾ ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.