ಯೋಹಾನ 3:36 - ಪರಿಶುದ್ದ ಬೈಬಲ್36 ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಜೊ ಕೊನ್ ಲೆಕಾಚ್ಯಾ ವರ್ತಿ ವಿಶ್ವಾಸ್ ಕರ್‍ತಾ ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ; ಜೆ ಕೊನ್ ಲೆಕಾಚಿ ಆಜ್ಞಾ ಮಾನಿನಾತ್, ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವಿನಾ, ತೆನಿ ದೆವಾಚ್ಯಾ ರಾಗಾತ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.