ಯೋಹಾನ 4:14 - ಪರಿಶುದ್ದ ಬೈಬಲ್14 ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಮಿಯಾ ದಿಲ್ಲೆ ಪಾನಿ ಜೆ ಕೊನ್ ಫಿತಾ, ತೆಕಾ ಕನ್ನಾಬಿ ಅನಿ ಪರ್ತುನ್ ಸೊಸ್‍ಲಾಗಿನಾ. ಮಿಯಾ ದಿಲ್ಲೆ ಪಾನಿ ದಿತಲೆ ಪಾನಿ ಭುತ್ತುರ್ ಎಕ್ ಝರೊ ಸರ್ಕೆ ತೆಂಕಾ ಜಿವ್ ದಿತಲೆ ಪಾನಿ ದಿವ್ನಗೆತುಚ್ ರ್‍ಹಾತಾ, ಅನಿ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.