Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:15 - ಪರಿಶುದ್ದ ಬೈಬಲ್‌

15 ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಆಕೆ, “ಸ್ವಾಮೀ, ಅಂಥ ನೀರನ್ನು ಕೊಡಿ; ಇನ್ನು ಮುಂದೆ ನನಗೆ ದಾಹವಾಗದಿರಲಿ. ನೀರು ಸೇದಲು ಇಷ್ಟು ದೂರ ಬರುವುದು ತಪ್ಪಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಹೆಂಗಸು - ಅಯ್ಯಾ, ನನಗೆ ಆ ನೀರನ್ನು ಕೊಡು; ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗಲಿಕ್ಕಿಲ್ಲ; ನೀರು ಸೇದುವದಕ್ಕೆ ಇಷ್ಟು ದೂರ ಬರಬೇಕಾದದ್ದೂ ಇರುವದಿಲ್ಲ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಆ ಸ್ತ್ರೀಯು, “ಅಯ್ಯಾ, ಆ ನೀರನ್ನೇ ನನಗೆ ಕೊಡು. ಆಗ ನನಗೆ ದಾಹವಾಗುವುದಿಲ್ಲ. ಇನ್ನು ಮುಂದೆ ನಾನು ನೀರು ಸೇದುವುದಕ್ಕೆ ಇಲ್ಲಿಗೆ ಬರುವ ಅವಶ್ಯವಿರುವುದಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತ್ಯಾ ಬಾಯ್ಕೊಮನ್ಸಿನ್‍, “ಸಾಯ್ಬಾ, ಮಾಕಾ ತೆ ಪಾನಿ ದಿ! ಅಶೆ ಕನ್ನಾಬಿ ಮಾಕಾ ಸೊಸ್‍ಲಾಗಿನಾ”, ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:15
11 ತಿಳಿವುಗಳ ಹೋಲಿಕೆ  

ಜನರು, “ಅಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದು ಕೇಳಿಕೊಂಡರು.


ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.


“ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.


ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು