Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:18 - ಪರಿಶುದ್ದ ಬೈಬಲ್‌

18 ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ನಿನಗೆ ಐದು ಜನ ಗಂಡಂದಿರು ಇದ್ದರು. ಈಗ ನಿನ್ನೊಡನೆ ಇರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು ಯೇಸು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನಗೆ ಐದುಮಂದಿ ಗಂಡಂದಿರಿದ್ದರು, ಈಗ ಇರುವವನು ನಿನಗೆ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನಗೆ ಐದು ಮಂದಿ ಗಂಡಂದಿರು ಇದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಿಕಾ ಪಾಂಚ್ ಜಾನಾಕ್ನಿ ಲಗಿನ್ ಹೊಲಿ, ಅನಿ ಅತ್ತಾ ತಿಯಾ ಕೊನಾಚ್ಯಾ ವಾಂಗ್ಡಾ ಹಾಸ್ ತೊ ತುಜೊ ಖರೊ ಘೊವ್ ನ್ಹಯ್ ತಿಯಾ ಮಾಕಾ ಖರೆ ಹೊತ್ತೆ ಸಾಂಗಟ್ಲೆಯ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:18
16 ತಿಳಿವುಗಳ ಹೋಲಿಕೆ  

ಆದರೆ ನೀವು ಗಂಡನಿಗೆ ವಂಚಿಸುವ ಜಾರಿಣಿಯಂತಾದಿರಿ. ಇಸ್ರೇಲ್ ವಂಶದವರೇ, ನೀವು ನನಗೆ ದ್ರೋಹ ಮಾಡಿದಿರಿ” ಎಂದು ಯೆಹೋವನು ನುಡಿದನು.


ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.


ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ.


ವ್ಯಭಿಚಾರಿಣಿಯೇ, ನೀನು ನಿನ್ನ ಸ್ವಂತ ಗಂಡನಿಗಿಂತ ಪರಪುರುಷನನ್ನೇ ಹೆಚ್ಚಾಗಿ ಆಶಿಸುವವಳಾಗಿರುವೆ.


ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.


“ಇದೇ ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ. ಗಂಡನ ಸ್ವಾಧೀನದಲ್ಲಿರುವ ಹೆಂಡತಿಯು


ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು.


ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು. ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ.


ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ.


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು