ಯೋಹಾನ 4:6 - ಪರಿಶುದ್ದ ಬೈಬಲ್6 ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಥೈ ಜಾಕೊಬಾಚಿ ಭಾಂಯ್ ಹೊತ್ತಿ, ಜೆಜುಕ್ ಚಲುನ್‍ಚಲುನ್ ಫಿರೆ ಹೊಲ್ಲೆ, ಮನುನ್ ತೊ ಥೈ ಭಾಂಯ್ಚ್ಯಾ ಕಟ್ಟ್ಯಾರ್ ಬಸ್ಲೊ, ತನ್ನಾ ಜಗ್ಗೊಳ್ ದೊಪಾರ್ ಹೊಲ್ಲಿ. ಅಧ್ಯಾಯವನ್ನು ನೋಡಿ |