Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:1 - ಪರಿಶುದ್ದ ಬೈಬಲ್‌

1 ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಯೆಹೂದ್ಯರದೊಂದು ಜಾತ್ರೆ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾ ಮಾನಾ ಜೆಜು ಜೆರುಜಲೆಮಾಕ್ ಗೆಲೊ, ಜುದೆವ್ ಲೊಕಾಂಚೊ ಎಕ್ ಸನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:1
8 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


“ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.


ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.


“ಅಬೀಬ್ ತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು