Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:15 - ಪರಿಶುದ್ದ ಬೈಬಲ್‌

15 ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಮನುಷ್ಯನು ಅಲ್ಲಿಂದ ಹೋಗಿ - ನನ್ನನ್ನು ಸ್ವಸ್ಥಮಾಡಿದವನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಹೊರಟುಹೋಗಿ ತನ್ನನ್ನು ಸ್ವಸ್ಥಪಡಿಸಿದವರು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತೊ ಗುನ್ ಹೊಲ್ಲೊ ಮಾನುಸ್, ಜುದೆವ್ ಲೊಕಾಂಚ್ಯಾ ಅದಿಕಾರ್‍ಯಾನಿಕ್ಡೆ ಗೆಲೊ ಅನಿ ಅಪ್ನಾಕ್ ಗುನ್ ಕರಲ್ಲೊ ಮಾನುಸ್ ಜೆಜು ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:15
12 ತಿಳಿವುಗಳ ಹೋಲಿಕೆ  

“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.


ಆ ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಆದ್ದರಿಂದ ಅವರು ಆ ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು. ಆ ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.


ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.


“ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.


ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.


ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.


ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು