Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:18 - ಪರಿಶುದ್ದ ಬೈಬಲ್‌

18 ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯಾ ಗೊಸ್ಟಿಕ್ ಲಾಗುನ್ ಜುದೆವಾಂಚ್ಯಾ ಅದಿಕಾರ್‍ಯಾಂಚ್ಯಾ ಮನಾತ್ನಿ ಜೆಜುಕ್ ಜಿವಾನಿ ಮಾರುಕ್ ಪಾಜೆ ಮನ್ತಲೊ ಘಟ್ ನಿರ್‍ದಾರ್ ಹೊಲೊ; ತೆನಿ ಖಾಲಿ ಸಬ್ಬಾತಾಚೊ ಖಾಯ್ದೊ ಮೊಡ್ಲ್ಯಾನ್ ಮನುನ್ ಎವ್ಡೆಚ್ ನ್ಹಯ್, ಜಾಲ್ಯಾರ್ ತೆನಿ ದೆವಾಕುಚ್ ಅಪ್ನಾಚೊ ಸ್ವತಾಚೊ ಬಾಬಾ ಮನುನ್ ಘೆಟಲ್ಲ್ಯಾನ್, ಅನಿ ಅಪ್ನಾಕುಚ್ ದೆವಾಚ್ಯಾ ಸಮಾ ಮನುನ್ ಕರುನ್ ಘೆಟಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:18
21 ತಿಳಿವುಗಳ ಹೋಲಿಕೆ  

ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.


ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.


ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?


ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?


“ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.


ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.


ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು