ಯೋಹಾನ 5:2 - ಪರಿಶುದ್ದ ಬೈಬಲ್2 ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ “ಬೆತ್ಸಥ” ಎಂದು ಕರೆಯುತ್ತಾರೆ. ಈ ಕೊಳವು “ಕುರಿಬಾಗಿಲು” ಎಂಬ ಸ್ಥಳದ ಸಮೀಪದಲ್ಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆರೂಸಲೇವಿುನಲ್ಲಿ ಕುರೀ ಅಗಸೇಬಾಗಲಿನ ಹತ್ತಿರದಲ್ಲಿ ಒಂದು ಕೊಳವಿದೆ; ಇದಕ್ಕೆ ಇಬ್ರಿಯ ಮಾತಿನಲ್ಲಿ ಬೇತ್ಸಥಾ ಎಂದು ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆರುಜಲೆಮಾತ್ ಬಕ್ರಿ ಇಕ್ತಲೊ ಎಕ್ ಜಾಗೊ ಹೊತ್ತೊ ತ್ಯಾ ವಾಟೆರ್ ಎಕ್ ಪಾಂಚ್ ಮಂಟಪಾಂಚೆ ತಳೆ ಹೊತ್ತೆ. ಜುದೆವ್ ಲೊಕಾ ಹ್ಯಾ ತಳ್ಯಾಕ್ ಬೆಥ್‍ಝತಾ ಮನುನ್ ಬಲ್ವುತಾತ್. ಅಧ್ಯಾಯವನ್ನು ನೋಡಿ |
ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.