ಯೋಹಾನ 5:20 - ಪರಿಶುದ್ದ ಬೈಬಲ್20 ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತಂದೆಯು ಮಗನ ಮೇಲೆ ಮಮತೆಯಿಟ್ಟು ತಾನು ಮಾಡುವವುಗಳನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ದೊಡ್ಡ ಕೆಲಸಗಳನ್ನು ಅವನಿಗೆ ತೋರಿಸುವನು; ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಬಾಬಾ ಲೆಕಾಚೊ ಪ್ರೆಮ್ ಕರ್‍ತಾ, ಅನಿ ತೊ ಅಪ್ನಿ ಕಾಯ್ ಕರ್‍ತಾ ತೆ ಸಗ್ಳೆ ಲೆಕಾಕ್ ದಾಕ್ವುತಾ. ಹೆಚ್ಯೆನ್ಬಿ ಮೊಟಿ ಕಾಮಾ ಕರುಕ್ ಬಾಬಾ ಲೆಕಾಕ್ ಶಿಕ್ವುನ್ ದಿತಾ. ಅಶೆ ತುಮಿ ಸಗ್ಳೆ ಅಜಾಪ್ ಹೊತ್ಯಾಶಿ. ಅಧ್ಯಾಯವನ್ನು ನೋಡಿ |