Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:29 - ಪರಿಶುದ್ದ ಬೈಬಲ್‌

29 ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎದ್ದು ಹೊರಗೆ ಬರುವ ಕಾಲ ಬರುತ್ತದೆ. ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಾಗುವದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅನಿ ತೆಂಚ್ಯಾ- ತೆಂಚ್ಯಾ ಸಾರಿಯಾನಿತ್ನಾ ಉಟುನ್ ಭಾಯ್ರ್ ಯೆತಾತ್, ಜೆ ಕೊನ್ ಬರೆ ಕರ್‍ಲ್ಯಾನಾತ್ ತೆನಿ ಝಿತ್ತೆ ಹೊತ್ಯಾತ್ ಅನಿ ಜಿವನ್ ಕರ್‍ತಾತ್, ಅನಿ ಜೆ ಕೊನ್ ವಾಯ್ಟ್ ಕರ್‍ಲ್ಯಾನಾತ್ ತೆನಿ ಉಟ್ತಾತ್, ಅನಿ ತೆಂಚಿ ಇಚಾರ್‍ನಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:29
11 ತಿಳಿವುಗಳ ಹೋಲಿಕೆ  

ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.


ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.


ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು