ಯೋಹಾನ 5:3 - ಪರಿಶುದ್ದ ಬೈಬಲ್3 ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193-4 ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಲ್ಲಿ ಐದು ಮಂಟಪಗಳಿವೆ; ಇವುಗಳಲ್ಲಿ ಬಹುಮಂದಿ ರೋಗಿಗಳೂ ಕುರುಡರೂ ಕುಂಟರೂ ಮೈಒಣಗಿದವರೂ ಬಿದ್ದುಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾ ತಳ್ಯಾಚ್ಯಾ ಮಂಟಪಾ ವೈನಿ ಶಿಕ್ ಹೊತ್ತ್ಯಾ ಲೊಕಾಂಚೊ ತಾಂಡೊ ಪಡುನ್ ರ್‍ಹಾಯ್. ಕುಡ್ಡಿ, ಸೊಟ್ಟಿ, ವಾರ್‍ಯಾನ್ ಮಾರಲ್ಲಿ ಲೊಕಾ ಥೈ ಹೊತ್ತಿ. ಪಾನಿ ಹಾಲ್ತಲೆ ರಾಕಿತ್ ರ್‍ಹಾತ್ಯಾತ್, ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.