ಯೋಹಾನ 5:39 - ಪರಿಶುದ್ದ ಬೈಬಲ್39 ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತುಮಿ ಪವಿತ್ರ್ ಪುಸ್ತಕಾತ್ಲೆ ಬರೆ ಕರುನ್ ಶಿಕ್ಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತ್ಯಾತುರ್‍ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಹಾಯ್ ಮನುನ್ ತುಮಿ ಚಿಂತ್ಯಾಶಿ, ಖರೆ ತಿ ಸಗ್ಳಿ ನಿಯಮಾ ಪವಿತ್ರ್ ಪುಸ್ತಾಕಾ ಮಾಜ್ಯಾಚ್ ವಿಶಯಾತ್ ಬೊಲ್ತ್ಯಾತ್. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!