ಯೋಹಾನ 5:40 - ಪರಿಶುದ್ದ ಬೈಬಲ್40 ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆದರೂ ಜೀವ ಹೊಂದುವದಕ್ಕಾಗಿ ನನ್ನ ಬಳಿಗೆ ಬರುವದಕ್ಕೆ ನಿಮಗೆ ಮನಸ್ಸಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಅಜುನ್‍ಬಿ ತುಮ್ಕಾ ಜಿವ್ ಕಮ್ವುನ್ ಘೆವ್‍ಸಾಟ್ನಿ ಮಾಜ್ಯಾಕ್ಡೆ ಯೆವ್ಕ್ ಮನ್ ನಾ. ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.