ಯೋಹಾನ 5:44 - ಪರಿಶುದ್ದ ಬೈಬಲ್44 ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ದುಸ್ರ್ಯಾನಿಕ್ನಾ ಹೊಗ್ಳುನ್ ಘೆತಲೆ ತುಮ್ಕಾ ಬರೆ ದಿಸ್ತಾ. ಖರೆ ತುಮಿ ಎಕ್ಲ್ಯಾಚ್ ದೆವಾಕ್ನಾ ಹೊಗ್ಳುನ್ ಘೆವ್ಕ್ ಮನ್ ಕರಿನ್ಯಾಶಿ, ಅಶೆ ರ್‍ಹಾತಾನಾ ತುಮಿ ಮಾಜ್ಯಾ ಕಶೆ ವಿಶ್ವಾಸ್, ಕರುಕ್ ಹೊತಾ? ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.