Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:45 - ಪರಿಶುದ್ದ ಬೈಬಲ್‌

45 ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಾನು ತಂದೆಯ ಮುಂದೆ ನಿಮ್ಮ ಮೇಲೆ ತಪ್ಪುಹೊರಿಸುವೆನೆಂದು ನೆನಸಬೇಡಿರಿ; ನೀವು ಆಶ್ರಯಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ತಪ್ಪುಹೊರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಮಿಯಾ ಬಾಬಾಚ್ಯಾ ದೆವಾಚ್ಯಾ ಇದ್ರಾಕ್ ತುಮಿ ಚುಕಿದಾರ್ ಮನುನ್ ಮನ್ತಾ ಮನುನ್ ಚಿಂತುನಕಾಶಿ, ತುಮಿ ಬರೊಸೊ ಥವ್ನ್ ಹೊತ್ತೊ ಮೊಯ್ಜೆಚ್ ತುಮಿ ಚುಕಿದಾರ್ ಮನುನ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:45
14 ತಿಳಿವುಗಳ ಹೋಲಿಕೆ  

ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.


ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.


“ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.


ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು