ಯೋಹಾನ 5:6 - ಪರಿಶುದ್ದ ಬೈಬಲ್6 ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಥೈ ಪಡುನ್ ಹೊತ್ತ್ಯಾ ತ್ಯಾ ಮಾನ್ಸಾಕ್ ಜೆಜುನ್ ಬಗಟ್ಲ್ಯಾನ್, ಅನಿ ತೊ ಲೈ ದಿಸಾನಿಕ್ನಾ ಶಿಕ್ ಹೊತ್ತೊ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ಜೆಜುನ್ ತೆಕಾ “ತುಕಾ ಆರಾಮ್ ಹೊವ್ಕ್ ಮನ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”