ಯೋಹಾನ 6:11 - ಪರಿಶುದ್ದ ಬೈಬಲ್11 ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತರುವಾಯ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಕೂತುಕೊಂಡವರಿಗೆ ಹಂಚಿ ಕೊಟ್ಟನು; ಅದರಂತೆ ಮೀನುಗಳಲ್ಲಿಯೂ ಅವರಿಗೆ ಬೇಕಾದಷ್ಟು ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜುನ್ ಭಾಕ್ರಿ ಘೆಟ್ಲ್ಯಾನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಥೈ ಬಸಲ್ಲ್ಯಾ ಲೊಕಾಕ್ನಿ ವಾಟುಕ್ ಲಾವ್ಲ್ಯಾನ್. ಮಾಸೊಳ್ಯಾಬಿ ತೆನಿ ತಸೆಚ್ ಕರುನ್ ವಾಟುಕ್ ಲಾವ್ಲ್ಯಾನ್, ಲೊಕಾನಿ ತೆಂಕಾ ಪಾಜೆ ತವ್ಡೆ ಜೆವ್ಲ್ಯಾನಿ. ಅಧ್ಯಾಯವನ್ನು ನೋಡಿ |