Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:19 - ಪರಿಶುದ್ದ ಬೈಬಲ್‌

19 ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ಅವರು ಹುಟ್ಟುಹಾಕುತ್ತಾ ಹೆಚ್ಚು ಕಡಿಮೆ ಒಂದು ಹರದಾರಿ ದೂರ ಹೋದ ಬಳಿಕ ಯೇಸು ಸಮುದ್ರದ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವದನ್ನು ನೋಡಿ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಶಿಸಾ ಢೊನಾರ್ ತಿನ್-ಚಾರ್ ಮೈಲಾ ಭುತ್ತುರ್ ಜಾವ್ನ್ ಪಾವಲ್ಲಿ. ತನ್ನಾ ಜೆಜು ಪಾನಿಯಾಚ್ಯಾ ವರ್ತಿ ಚಲುನ್ ಯೆವ್‍ಲಾಗಲ್ಲೊ. ತೆನಿ ತೆಕಾ ಬಗಟ್ಲ್ಯಾನಿ ಅನಿ ತೆನಿ ಭಿಂಯಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:19
16 ತಿಳಿವುಗಳ ಹೋಲಿಕೆ  

“ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.


ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.


ಆಕಾಶಮಂಡಲವನ್ನು ಸೃಷ್ಟಿಸಿದವನು ಆತನೇ. ಆತನು ಭೋರ್ಗರೆಯುತ್ತಿರುವ ಸಮುದ್ರದ ಮೇಲೆ ನಡೆಯಬಲ್ಲನು.


ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು.


ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.


ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.


ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು.


ಆ ದ್ರಾಕ್ಷಿಯನ್ನು ನಗರದ ಹೊರಭಾಗದಲ್ಲಿದ್ದ ದ್ರಾಕ್ಷಿಯ ಆಲೆಯಲ್ಲಿ ಕಿವುಚಿ ಹಾಕಿದರು. ಆ ದ್ರಾಕ್ಷಿಯ ಆಲೆಯಿಂದ ರಕ್ತವು ಹೊರಕ್ಕೆ ಬಂದಿತು. ಅದು ಕುದುರೆಗಳ ತಲೆಗಳಷ್ಟು ಎತ್ತರಕ್ಕೆ ಏರಿ ಇನ್ನೂರು ಮೈಲಿಗಳಷ್ಟು ದೂರ ಹರಿಯಿತು.


ಬೆಥಾನಿಯು ಜೆರುಸಲೇಮಿನಿಂದ ಸುಮಾರು ಎರಡು ಮೈಲಿಗಳಷ್ಟು ದೂರದಲ್ಲಿತ್ತು.


ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು.


ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.


ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು.


ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು