Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:23 - ಪರಿಶುದ್ದ ಬೈಬಲ್‌

23 ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ದುಸ್ರ್ಯಾ ಢೊನಿಯಾ ತಿಬೆರಿಯಾ ಸಮುಂದರಾತ್ನಾ ಧನಿಯಾನ್ ಧನ್ಯವಾದ್ ದಿಲ್ಲ್ಯಾ ಮಾನಾ ಜೆವಾನ್ ಜೆವಲ್ಲ್ಯಾ ಜಾಗ್ಯಾಚ್ಯಾ ಜಗ್ಗೊಳ್ ತಿಕುಲ್ಯಾ ದಂಡೆಕ್ ಯೆವ್ನ್ ಪಾವಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:23
5 ತಿಳಿವುಗಳ ಹೋಲಿಕೆ  

ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.


ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.


ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ


“ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು