Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:36 - ಪರಿಶುದ್ದ ಬೈಬಲ್‌

36 ನಾನು ನಿಮಗೆ ಮೊದಲೇ ಹೇಳಿದಂತೆ, ನೀವು ನನ್ನನ್ನು ನೋಡಿದ್ದರೂ ಇನ್ನೂ ನನ್ನನ್ನು ನಂಬುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದರೆ ನೀವು ನನ್ನನ್ನು ನೋಡಿದ್ದರೂ ನಂಬದೆ ಇದ್ದೀರಿ ಎಂದು ನಿಮಗೆ ಹೇಳಿದೆನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದರೆ, ‘ನೀವು ನನ್ನನ್ನು ಕಂಡಿದ್ದರೂ ನಂಬಲಿಲ್ಲ,’ ಎಂದು ನಾನು ನಿಮಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಮಿಯಾ ಮನ್ತಾ ತುಮಿ ಮಾಕಾ ಬಗಟ್ಲ್ಯಾಶಿ ಜಾಲ್ಯಾರ್‍ಬಿ ಅಜುನ್ ತುಮಿ ಮಾಜ್ಯಾ ವರ್ತಿ ವಿಶ್ವಾಸ್, ಕರಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:36
9 ತಿಳಿವುಗಳ ಹೋಲಿಕೆ  

ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.


ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು