Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:45 - ಪರಿಶುದ್ದ ಬೈಬಲ್‌

45 ‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಪ್ರವಾದ್ಯಾನಿ ಲಿವಲ್ಲೆ ಹಾಯ್, ಸಗ್ಳ್ಯಾಕ್ನಿ ದೆವಾನ್ ಶಿಕ್ವುನ್ ಹೊತಾ ಜೆ ಕೊನ್ ಮಾಜ್ಯಾ ಬಾಬಾಕ್ ಆಯಿಕ್ತ್ಯಾತ್ ಅನಿ ಶಿಕ್ತಾತ್ ತೆನಿ ಮಾಜ್ಯಾಕ್ಡೆ ಯೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:45
24 ತಿಳಿವುಗಳ ಹೋಲಿಕೆ  

ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”


ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!


ಇದನ್ನು ಆತನು ಪೂರ್ವಕಾಲದ ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.


ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.”


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.


ಆದ್ದರಿಂದ ಪ್ರವಾದಿಗಳು ತಿಳಿಸಿರುವ ಈ ಕೆಲವು ಸಂಗತಿಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:


ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು