Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:47 - ಪರಿಶುದ್ದ ಬೈಬಲ್‌

47 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಮಿಯಾ ತುಮ್ಕಾ ಖರೆ ಸಾಂಗ್ತಾ! ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:47
15 ತಿಳಿವುಗಳ ಹೋಲಿಕೆ  

ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಪರಲೋಕದಿಂದ ಇಳಿದುಬರುವ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಎಂದಿಗೂ ಸಾಯುವುದಿಲ್ಲ.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.


ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು