Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:52 - ಪರಿಶುದ್ದ ಬೈಬಲ್‌

52 ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮತಮ್ಮೊಳಗೆ ವಾಗ್ವಾದ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಆಗ ಯೆಹೂದ್ಯರು - ಇವನು ತನ್ನ ಮಾಂಸವನ್ನು ನಮಗೆ ಹೇಗೆ ತಿನ್ನುವದಕ್ಕೆ ಕೊಟ್ಟಾನು ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಹೆ ಆಯ್ಕುನ್ ತೆಂಚ್ಯಾ ಮದ್ದಿ ರಾಗಾಚ್ಯಾ ಗೊಸ್ಟಿಯಾ ಉಟುಕ್‍ ಲಾಗ್ಲ್ಯಾ, ತೆನಿ “ಹ್ಯೊ ಮಾನುಸ್ ಅಮ್ಕಾ ಖಾವ್ಕ್ ಅಪ್ನಾಚೆ ಮಾಸ್ ದಿತಾ: ಮನ್ತಾ ಮಟ್ಲ್ಯಾರ್ ಹೆ ಕಶೆ?” ಮನುನ್ ಇಚಾರುಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:52
11 ತಿಳಿವುಗಳ ಹೋಲಿಕೆ  

ಯೇಸು ಈ ಸಂಗತಿಗಳನ್ನು ಹೇಳಿದ್ದರಿಂದ ಯೆಹೂದ್ಯರಲ್ಲಿ ಮತ್ತೆ ಭೇದ ಉಂಟಾಯಿತು.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.


ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.


ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.


ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.


“ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.


ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು