ಯೋಹಾನ 6:54 - ಪರಿಶುದ್ದ ಬೈಬಲ್54 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಜೆ ಕೊನ್ ಮಾಜೆ ಶರಿರ್ ಖಾತಾತ್, ಅನಿ ರಗಾತ್ ಫಿತಾತ್ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ, ಆಕ್ರಿಚ್ಯಾ ದಿಸಿ ಮಿಯಾ ತೆಂಕಾ ಝಿತ್ತೆ ಕರುನ್ ಉಟ್ವುತಾ. ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.