Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:62 - ಪರಿಶುದ್ದ ಬೈಬಲ್‌

62 ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ತರ್ ತುಮಿ ಮಾನ್ಸಾಚೊ ಲೆಕ್‍ ತೊ ಅದ್ದಿ ಹೊತ್ತ್ಯಾ ಜಾಗ್ಯಾತ್‍ ಜಾತಲೆ ಬಗ್ಲ್ಯಾರ್ ತುಮಿ ಕಾಯ್ ಕರ್‍ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:62
13 ತಿಳಿವುಗಳ ಹೋಲಿಕೆ  

ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.


ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ‘ನಾನು ಪರಲೋಕದಿಂದ ಇಳಿದುಬಂದೆನು’ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು