Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:65 - ಪರಿಶುದ್ದ ಬೈಬಲ್‌

65 ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 “ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಮತ್ತು ಆತನು - ತಂದೆಯ ಅನುಗ್ರಹವಿಲ್ಲದೆ ಯಾರೂ ನನ್ನ ಬಳಿಗೆ ಬರಲಾರರು ಎಂಬದನ್ನು ನಾನು ನಿಮಗೆ ಅದರ ದೆಸೆಯಿಂದಲೇ ಹೇಳಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ಜೆಜುನ್ ಫಿಡೆ ಬೊಲುನ್ ತೆನಿ,“ತೆಚೆಸಾಟ್ನಿ ಮಿಯಾ ಬಾಬಾನ್ ಯೆಯ್ ಸರ್ಕೆ ಕರ್‍ತಲ್ಯಾ ಶಿವಾಯ್ ಮಾಜ್ಯಾಕ್ಡೆ ಕೊನ್ಬಿ ಯೆಯ್ನಾತ್ ಮನುನ್ ಮಿಯಾ ಸಾಂಗಲ್ಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:65
14 ತಿಳಿವುಗಳ ಹೋಲಿಕೆ  

ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು