Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:66 - ಪರಿಶುದ್ದ ಬೈಬಲ್‌

66 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತನ ಹಿಂಬಾಲಕರಲ್ಲಿ ಅನೇಕರು ಆತನನ್ನು ತೊರೆದುಬಿಟ್ಟರು. ಅವರು ಆತನನ್ನು ಹಿಂಬಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂಜರಿದು ಆತನ ಕೂಡ ಸಂಚಾರಮಾಡುವದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ಹ್ಯಾ ಗೊಸ್ಟಿಯಾ ಲಾಗುನ್ ಜೆಜುಚ್ಯಾ ವಾಂಗ್ಡಾ ಹೊತ್ತಿ ಸುಮಾರ್ ಲೊಕಾ ತೆಕಾ ಸೊಡುನ್ ಗೆಲಿ, ಅನಿ ತ್ಯೆಚ್ಯಾ ಫಾಟ್ನಾ ಕನ್ನಾಬಿ ಯೆವ್ಕನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:66
17 ತಿಳಿವುಗಳ ಹೋಲಿಕೆ  

ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”


ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.


ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.


ಇದನ್ನು ಕೇಳಿದಾಗ ಅವನು ಬಹಳ ದುಃಖದಿಂದ ಹೊರಟುಹೋದನು. ಏಕೆಂದರೆ ಅವನು ದೊಡ್ಡ ಐಶ್ವರ್ಯವಂತನಾಗಿದ್ದನು.


ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.


ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು