ಯೋಹಾನ 7:19 - ಪರಿಶುದ್ದ ಬೈಬಲ್19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟಿದ್ದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯುವದಿಲ್ಲವಲ್ಲಾ; ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ? ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಮ್ಕಾ ಮೊಯ್ಜೆನ್ ಖಾಯ್ದೆ ದಿಲ್ಲೆ ಹೊಯ್ ಕಿ ನ್ಹಯ್? ಖರೆ ತುಮ್ಚ್ಯಾತ್ಲೊ ಕೊನ್ಬಿ ಹೆ ಖಾಯ್ದೆ ಪಾಳಿನಾ. ತುಮಿ ಮಾಕಾ ಜಿವಾನಿ ಮಾರುಕ್ ಕಶ್ಯಾಕ್ ಬಗುಲ್ಯಾಸಿ?" ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.