Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:23 - ಪರಿಶುದ್ದ ಬೈಬಲ್‌

23 ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿ ಮಾಡಬಹುದಾದರೆ ಅದೇ ಸಬ್ಬತ್ ದಿನದಲ್ಲಿ ನಾನು ಒಬ್ಬ ಮನುಷ್ಯನನ್ನು ಸಂಪೂರ್ಣ ಸ್ವಸ್ಥಪಡಿಸಿದ್ದಕ್ಕೆ ನೀವು ಸಿಟ್ಟಾಗಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆಯ ನೇಮವನ್ನು ಮೀರಬಾರದೆಂದು ಒಬ್ಬನು ಸಬ್ಬತ್‍ದಿನದಲ್ಲಿ ಸುನ್ನತಿಮಾಡಿಸಿಕೊಳ್ಳುವದಾದರೆ ನಾನು ಸಬ್ಬತ್‍ದಿನದಲ್ಲಿ ಒಬ್ಬ ಮನುಷ್ಯನನ್ನು ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ಕೋಪಗೊಳ್ಳುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜರ್ ತರ್ ಸಬ್ಬಾತಾಚ್ಯಾ ದಿಸಿ ಎಕ್ ಝಿಲ್ಗ್ಯಾಚಿ ಸುನ್ನತ್ ಕರ್‍ತ್ಯಾಶಿ, ತರ್ ಮೊಯ್ಜೆನ್ ದಿಲ್ಲೊ ಖಾಯ್ದೊ ಮೊಡ್ಲ್ಯಾ ಸರ್ಕೆ ಹೊಯ್ನಾ, ತಸೆಜಾಲ್ಯಾರ್ ಎಕ್ ಮಾನ್ಸಾಕ್ ಸಬ್ಬಾತಾ ದಿಸಿ ಬರೆ ಕರ್ಲ್ಯಾರ್ ತುಮ್ಕಾ ಕಶ್ಯಾಕ್ ತುಮಿ ಕೆಕಾ ರಾಗ್ ಯೆವ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:23
9 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?


ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.


“‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.


ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.


ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.


ಯೇಸು ಅವರಿಗೆ, “ನಾನು ಮಾಡಿದ ಒಂದು ಅದ್ಭುತಕಾರ್ಯವನ್ನು ಕಂಡು ನೀವೆಲ್ಲರೂ ಆಶ್ಚರ್ಯಗೊಂಡಿದ್ದೀರಿ.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು