Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:31 - ಪರಿಶುದ್ದ ಬೈಬಲ್‌

31 ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ತ್ಯಾ ತಾಂಡ್ಯಾತ್ಲ್ಯಾ ಸುಮಾರ್ ಲೊಕಾನಿ ತೆಚೆವರ್ತಿ ವಿಶ್ವಾಸ್ ಕರ್ಲ್ಯಾನಿ ಅನಿ, “ಮೆಸ್ಸಿಯಾ ಯೆಲ್ಲ್ಯಾತನ್ನಾ ಹ್ಯಾ ಮಾನ್ಸಾಚ್ಯಾನ್ಕಿ ಜಾಸ್ತಿ ಅಜಾಪಾ ಕರ್‍ತಾ ಕಾಯ್?” ತೆಚ್ಯಾನ್ಕಿ ಲೈ ಕರುಕ್ ಹೊಯ್ ನಾ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:31
19 ತಿಳಿವುಗಳ ಹೋಲಿಕೆ  

ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.


ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.


ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


ಲಾಜರನ ನಿಮಿತ್ತ ಅನೇಕ ಯೆಹೂದ್ಯರು ತಮ್ಮ ನಾಯಕರನ್ನು ತೊರೆದು ಯೇಸುವಿನಲ್ಲಿ ನಂಬಿಕೆ ಇಡುತ್ತಿದ್ದರು. ಆದಕಾರಣವೇ ಯೆಹೂದ್ಯ ನಾಯಕರು ಲಾಜರನನ್ನು ಸಹ ಕೊಲ್ಲಬೇಕೆಂದಿದ್ದರು.


ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.


ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.


“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.


ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು