Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:39 - ಪರಿಶುದ್ದ ಬೈಬಲ್‌

39 ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜು ಆತ್ಮ್ಯಾಚ್ಯಾ ವಿಶಯಾತ್ ಬೊಲ್ಲ್ಯಾನ್. ಹೆ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾಕ್ನಿ ಗಾವ್ತಲೆ ಹೊತ್ತೆ. ಪವಿತ್ರ್ ತ್ಯಾ ಎಳಾರ್ ಅಜುನ್ ಪವಿತ್ರ್ ಆತ್ಮ್ಯಾಕ್ ದಿಲ್ಲೆ ನತ್ತೆ, ಕಶ್ಯಾಕ್ ಮಟ್ಲ್ಯಾರ್, ಅಜುನ್ ಬಿ ಜೆಜುಕ್ ಮಹಿಮೆಚ್ಯಾ ವಾಂಗ್ಡಾ ಉಟ್ವಲ್ಲೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:39
42 ತಿಳಿವುಗಳ ಹೋಲಿಕೆ  

‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.


ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.


ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


ಯೇಸು ಹೀಗೆ ಹೇಳಿದ ನಂತರ ಶಿಷ್ಯರ ಮೇಲೆ ಉಸಿರೂದಿ, “ಪವಿತ್ರಾತ್ಮನನ್ನು ಸ್ವೀಕರಿಸಿಕೊಳ್ಳಿ.


ಯೇಸು ಅವರಿಗೆ, “ಮನುಷ್ಯಕುಮಾರನು ತನ್ನ ಮಹಿಮೆಯನ್ನು ಹೊಂದುವ ಸಮಯ ಇದೇ ಆಗಿದೆ.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಹೀಗಿರಲಾಗಿ ಪವಿತ್ರಾತ್ಮನ ಸಂಬಂಧವಾದ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.


ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.


ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.


ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.


ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.


ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.


ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.


ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.


ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.


ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.


ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.


ಸತ್ಯದ ಆತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು ನಿಮಗೆ ತಿಳಿಸುವುದರ ಮೂಲಕ ನನ್ನನ್ನು ಮಹಿಮೆಪಡಿಸುವನು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.


“ನೀವು ನಂಬಿಕೊಂಡಾಗ ಪವಿತ್ರಾತ್ಮನನ್ನು ಹೊಂದಿಕೊಂಡಿರಾ?” ಎಂದು ಕೇಳಿದನು. ಆ ಶಿಷ್ಯರು ಅವನಿಗೆ, “ಪವಿತ್ರಾತ್ಮನು ಇದ್ದಾನೆ ಎಂಬುದನ್ನು ನಾವು ಇದುವರೆಗೆ ಕೇಳಿಯೂ ಇಲ್ಲ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು