Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:51 - ಪರಿಶುದ್ದ ಬೈಬಲ್‌

51 ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಅವನು ಅವರಿಗೆ - ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವದೇನೆಂದು ತಿಳುಕೊಳ್ಳದೆ ಅವನ ವಿಷಯವಾಗಿ ತೀರ್ಪುಮಾಡುವದುಂಟೇ? ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 “ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 “ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಕೊನಾಕ್ಬಿ ಬರೆ ಕರುನ್ ಆಯ್ಕಲ್ಲ್ಯಾ ಶಿವಾಯ್ ಅನಿ ತೆನಿ ಕರಲ್ಲಿ ಚುಕ್ ಹುಡ್ಕುನ್ ಕಾಡ್ಲ್ಯಾ ಶಿವಾಯ್ ತೊ ಮಾನುಸ್ ಚುಕಿದಾರ್ ಮನುನ್ ಸಾಂಗುಕ್ ಹೊಯ್ನಾ” ಮಟ್ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:51
8 ತಿಳಿವುಗಳ ಹೋಲಿಕೆ  

ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.


ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’


ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.


ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.


“ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.


“ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು