ಯೋಹಾನ 7:7 - ಪರಿಶುದ್ದ ಬೈಬಲ್7 ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹ್ಯೊ ಜಗ್ ತುಮ್ಚೊ ದ್ವೆಸ್ ಕರಿನಾ ಖರೆ ತೊ ಮಾಜೊ ದ್ವೆಸ್ ಕರ್‍ತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚಿ ವಾಟಾ ಬುರ್ಶ್ಯಾ ಹಾತ್ ಮನುನ್ ಸಾಂಗುಂಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.