ಯೋಹಾನ 8:3 - ಪರಿಶುದ್ದ ಬೈಬಲ್3 ಧರ್ಮೋಪದೇಶಕರು ಮತ್ತು ಫರಿಸಾಯರು ಒಬ್ಬ ಸ್ತ್ರೀಯನ್ನು ಅಲ್ಲಿಗೆ ಕರೆದುಕೊಂಡು ಬಂದರು. ಆ ಸ್ತ್ರೀಯು ವ್ಯಭಿಚಾರ ಮಾಡುವಾಗಲೇ ಸಿಕ್ಕಿಕೊಂಡಿದ್ದಳು. ಅವರು ಆ ಸ್ತ್ರೀಯನ್ನು ಜನರ ಮುಂದೆ ಬಲವಂತವಾಗಿ ನಿಲ್ಲಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಕೂತುಕೊಂಡು ಅವರಿಗೆ ಉಪದೇಶಮಾಡುತ್ತಿರುವಲ್ಲಿ ಶಾಸ್ತ್ರಿಗಳೂ ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಶಾಸ್ತರಾ ಶಿಕ್ವುತಲ್ಯಾನಿ ಅನಿ ಫಾರಿಜೆವಾನಿ ವೆಭಿಚಾರ್ ಕರ್‍ತಾನಾ ಗಾವುನ್ ಪಡಲ್ಲ್ಯಾ ಎಕ್ ಬಾಯ್ಕೊಮನ್ಸಿಕ್ ಘೆವ್ನ್ ಯೆಲ್ಯಾನಿ, ಅನಿ ಸಗ್ಳ್ಯಾಂಚ್ಯಾ ಇದ್ರಾಕ್ ತಿಕಾ ಇಬೆ ಕರ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ.