ಯೋಹಾನ 8:33 - ಪರಿಶುದ್ದ ಬೈಬಲ್33 ಯೆಹೂದ್ಯರು, “ನಾವು ಅಬ್ರಹಾಮನ ಮಕ್ಕಳು. ನಾವೆಂದೂ ಯಾರ ಗುಲಾಮರೂ ಆಗಿರಲಿಲ್ಲ. ಹೀಗಿದ್ದರೂ, ನಮಗೆ ಬಿಡುಗಡೆ ಆಗುವುದೆಂದು ನೀನು ಹೇಳುವುದೇಕೆ?” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ತೆನಿ ಅಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಅನಿ ಅಮಿ ಕನ್ನಾಚ್ ಕೊನಾಚೆ ಗುಲಾಮ್ ಹೊವ್ಕನಾವ್. ತುಮಿ ಸ್ವತಂತ್ರ್ ಹೊತ್ಯಾಶಿ ಮನುನ್ ತಿಯಾ ಸಾಂಗಲ್ಲ್ಯಾ ಗೊಸ್ಟಿಚೊ ಅರ್ತ್ ಕಾಯ್? ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.