ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.
ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.
ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.
ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.
ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.
ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.
ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.