Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:49 - ಪರಿಶುದ್ದ ಬೈಬಲ್‌

49 ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅದಕ್ಕೆ ಯೇಸು, “ನಾನು ದೆವ್ವಹಿಡಿದವನಲ್ಲ, ನನ್ನ ಪಿತನನ್ನು ನಾನು ಗೌರವಿಸುತ್ತೇನೆ. ನೀವಾದರೋ ನನ್ನನ್ನು ಅವಮಾನಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಯೇಸು - ನಾನು ದೆವ್ವಹಿಡಿದವನಲ್ಲ, ನನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದೇನೆ; ಆದರೂ ನೀವು ನನ್ನನ್ನು ಅವಮಾನಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತನ್ನಾ ಜೆಜುನ್ “ಮಾಕಾ ಗಿರೊ ಲಾಗುಕ್ ನಾ” ಮಿಯಾ ಮಾಜ್ಯಾ ಬಾಬಾಕ್ ಮಾನ್ ದಿತಾ ಖರೆ ತುಮಿ ಮಾಕಾ ಮಾನ್ ದಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:49
16 ತಿಳಿವುಗಳ ಹೋಲಿಕೆ  

ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.


ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.


ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.


ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.


ಯೆಹೋವನು ಹೀಗೆಂದನು: “ಇಸ್ರೇಲೇ, ನೀನೇ ನನ್ನ ಸೇವಕನು. ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.”


ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.


ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ಮನುಷ್ಯನ ಸ್ವಭಾವವೇ ತಿಳಿಸುವಂತೆ ಉದ್ದನೆಯ ಕೂದಲನ್ನು ಹೊಂದಿರುವುದು ಪುರುಷನಿಗೆ ಅವಮಾನಕರವಾಗಿದೆ.


ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು