Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:55 - ಪರಿಶುದ್ದ ಬೈಬಲ್‌

55 ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ತುಮಿ ತೆಕಾ ಕನ್ನಾಬಿ ವಳ್ಕಿನ್ಯಾಶಿ ಖರೆ ಮಿಯಾ ತೆಕಾ ವಳಕ್ತಾ, ಅನಿ ಮಿಯಾ ತೆಕಾ ವಳ್ಕಿನಾ ಮನುನ್ ಸಾಂಗಟ್ಲ್ಯಾರ್ ಮಿಯಾಬಿ ತುಮ್ಚ್ಯಾ ಸರ್ಕೊಚ್ ಝುಟೊ ಹೊತಾ. ಖರೆ ಮಿಯಾ ತೆಕಾ ವಳಕ್ತಾ ಅನಿ ತೆಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:55
25 ತಿಳಿವುಗಳ ಹೋಲಿಕೆ  

ಜನರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದು ಕೇಳಿದರು. ಯೇಸು, “ನಿಮಗೆ ನಾನಾಗಲಿ, ನನ್ನ ತಂದೆಯಾಗಲಿ ಗೊತ್ತಿಲ್ಲ. ನೀವು ನನ್ನನ್ನು ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದಿರುವಿರಿ” ಎಂದು ಹೇಳಿದನು.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.


“ದೇವರನ್ನು ನಾನು ಬಲ್ಲೆನು” ಎಂದು ಹೇಳುವವನು ದೇವರ ಆಜ್ಞೆಗಳಿಗೆ ವಿಧೇಯನಾಗಿರದಿದ್ದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನಲ್ಲಿ ಸತ್ಯವಿಲ್ಲ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.


ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.


ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


“ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”


ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಆದ್ದರಿಂದ ದೇವರ ಜೊತೆಯಲ್ಲಿ ಅನ್ಯೋನ್ಯತೆಯಿಂದ ಇದ್ದೇವೆ ಎಂದು ನಾವು ಹೇಳಿಕೊಂಡು, ಅಂಧಕಾರದಲ್ಲಿ ಜೀವಿಸುತ್ತಿದ್ದರೆ ಸುಳ್ಳು ಹೇಳಿದಂತಾಯಿತು. ಏಕೆಂದರೆ ನಾವು ಸತ್ಯವನ್ನು ಅನುಸರಿಸುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು