Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:11 - ಪರಿಶುದ್ದ ಬೈಬಲ್‌

11 ಆ ಮನುಷ್ಯನು, “ಯೇಸು ಎಂಬವನು ಸ್ವಲ್ಪ ಕೆಸರನ್ನು ಮಾಡಿ ನನ್ನ ಕಣ್ಣುಗಳಿಗೆ ಹಚ್ಚಿ, ಸಿಲೋವ ಕೊಳಕ್ಕೆ ಹೋಗಿ ತೊಳೆದುಕೊಳ್ಳಲು ಹೇಳಿದನು. ಅಂತೆಯೇ ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ಸಿಲೋವ ಕೊಳಕ್ಕೆ ಹೋಗಿ ತೊಳಕೋ ಎಂದು ಹೇಳಿದನು; ನಾನು ಹೋಗಿ ತೊಳಕೊಂಡೆನು; ಕಣ್ಣು ಬಂದವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತೆನಿ, “ಜೆಜು ಮನ್ತಲ್ಯಾ ಎಕ್ ಮಾನ್ಸಾನ್, ಉಲ್ಲೊ ಚಿಕ್ಕೊಲ್ ಮಾಜ್ಯಾ ಡೊಳ್ಯಾಕ್ನಿ ಲಾವ್ಲ್ಯಾನ್, ಅನಿ ಸಿಲೊಆಮ್ ತಳ್ಯಾತ್ ಜಾವ್ನ್ ಧುವ್ನ್ ಘೆ ಮಟ್ಲ್ಯಾನ್, ಮಿಯಾ ಗೆಲೊ ಅನಿ ಧುವ್ನ್ ಘೆಟ್ಲೊ, ತನ್ನಾ ಮಾಕಾ ದಿಸುಲಾಲೆ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:11
6 ತಿಳಿವುಗಳ ಹೋಲಿಕೆ  

ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು.


ಬಳಿಕ ಆ ಅಧಿಕಾರಿಗಳು ಬಾರೂಕನಿಗೆ, “ಬಾರೂಕನೇ, ನೀನು ಈ ಸುರುಳಿಯ ಮೇಲೆ ಬರೆದ ಸಂದೇಶಗಳನ್ನು ಎಲ್ಲಿಂದ ಪಡೆದೆ? ಯೆರಮೀಯನು ನಿನಗೆ ಹೇಳಿದ್ದನ್ನು ನೀನು ಬರೆದುಕೊಂಡೆಯಾ? ಹೇಳು” ಎಂದು ಪ್ರಶ್ನಿಸಿದರು.


ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?


ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.


ಜನರು ಆ ಮನುಷ್ಯನಿಗೆ, “ಆ ವ್ಯಕ್ತಿ ಎಲ್ಲಿದ್ದಾನೆ?” ಎಂದು ಕೇಳಿದರು. ಆ ಮನುಷ್ಯನು, “ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು