Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:2 - ಪರಿಶುದ್ದ ಬೈಬಲ್‌

2 ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯೆಚ್ಯಾ ಶಿಸಾನಿ ತೆಕಾ, “ಗುರುಜಿ, ಹ್ಯೊ ಮಾನುಸ್ ಕೊನಾಚ್ಯಾ ಪಾಪಾಕ್ ಲಾಗುನ್ ಕುಡ್ಡೊ ಹೊವ್ನ್ ಉಪಾಜ್ಲಾ? ತ್ಯೆಚ್ಯಾಚ್‍ ಪಾಪಾಕ್ನಿ ಲಾಗುನ್ ಕಾಯ್? ತ್ಯೆಚ್ಯಾ ಬಾಯ್ ಬಾಬಾಚ್ಯಾ ಪಾಪಾಕ್ನಿ ಲಾಗುನ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:2
9 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಕೊಲೆಗೀಡಾದವರು ಗಲಿಲಾಯದ ಇತರರೆಲ್ಲರಿಗಿಂತ ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.


ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.


“ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.


ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.


ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು