ಯೋಹಾನ 9:22 - ಪರಿಶುದ್ದ ಬೈಬಲ್22 ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜುದೆವಾಂಚ್ಯಾ ಫುಡಾರ್‍ಯಾಂಚ್ಯಾ ಭಿಂಯಾನ್ ತೆನಿ ಅದ್ದಿಚ್ ನಿರ್‍ದಾರ್ ಕರಲ್ಲ್ಯಾನಿ. ತ್ಯೆಚ್ಯಾ ಬಾಯ್ -ಬಾಬಾನಿ ಅಶೆ ಮಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜೆ ಕೊನ್ ಜೆಜುಕ್ ಮೆಸ್ಸಿಯಾ ಮನ್ತಾ ತೆಕಾ ಸಿನಾಗೊಗಾತ್ನಾ ಭಾಯ್ರ್ ಘಾಲ್ತಲೆ ಮನುನ್ ಅಧ್ಯಾಯವನ್ನು ನೋಡಿ |
ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.