ಯೋಹಾನ 9:24 - ಪರಿಶುದ್ದ ಬೈಬಲ್24 ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಅನಿ ಎಗ್ದಾ ದೊನ್ವೆಪಟಿ ತ್ಯಾ ಉಪಾಜಲ್ಲ್ಯಾಕ್ನಾ ಕುಡ್ಡೊ ಹೊತ್ತ್ಯಾ ಮಾನ್ಸಾಕ್ ಪಾರಿಜೆವಾನಿ ಬಲ್ವುಲ್ಯಾನಿ, “ಅನಿ ದೆವಾಚ್ಯಾ ನಾವಾನ್ ಮಹಿಮಾ ಘಾಲುನ್ ಅಮ್ಕಾ ಖರೆಚ್! ಸಾಂಗ್!. ತುಕಾ ಬರೆ ಕರಲ್ಲೊ ಮಾನುಸ್ ಪಾಪಿ ಮನುನ್ ಅಮ್ಕಾ ಗೊತ್ತ್ ಹಾಯ್”. ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”