Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:26 - ಪರಿಶುದ್ದ ಬೈಬಲ್‌

26 ಯೆಹೂದ್ಯನಾಯಕರು, “ಅವನು (ಯೇಸು) ನಿನಗೇನು ಮಾಡಿದನು? ಅವನು ನಿನ್ನ ಕಣ್ಣುಗಳನ್ನು ಹೇಗೆ ಗುಣಪಡಿಸಿದನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಅವನು ನಿನಗೇನು ಮಾಡಿದ? ನಿನಗೆ ಹೇಗೆ ಕಣ್ಣುಬರಿಸಿದ?” ಎಂದು ಅವರು ಮತ್ತೆ ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ಅವನನ್ನು - ನಿನಗೆ ಏನು ಮಾಡಿದನು? ನಿನಗೆ ಹೇಗೆ ಕಣ್ಣುಕೊಟ್ಟನು ಎಂದು ಕೇಳಿದ್ದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ಅವರು ಅವನಿಗೆ, “ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಫಾರಿಜೆವಾನಿ “ತೆನಿ ಕಾಯ್ ಕರ್ಲ್ಯಾನ್, ಕುಡ್ಡೊ ಹೊತ್ತ್ಯಾ ತುಕಾ ತೆನಿ ಕಶೆ ಕರುನ್ ಬರೆ ಕರ್ಲ್ಯಾನ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:26
7 ತಿಳಿವುಗಳ ಹೋಲಿಕೆ  

ಆ ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು.


ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು.


ಬಳಿಕ ಆ ಅಧಿಕಾರಿಗಳು ಬಾರೂಕನಿಗೆ, “ಬಾರೂಕನೇ, ನೀನು ಈ ಸುರುಳಿಯ ಮೇಲೆ ಬರೆದ ಸಂದೇಶಗಳನ್ನು ಎಲ್ಲಿಂದ ಪಡೆದೆ? ಯೆರಮೀಯನು ನಿನಗೆ ಹೇಳಿದ್ದನ್ನು ನೀನು ಬರೆದುಕೊಂಡೆಯಾ? ಹೇಳು” ಎಂದು ಪ್ರಶ್ನಿಸಿದರು.


ಯೇಸು ಅವನನ್ನು ವಾಸಿಮಾಡಿದರೆ, ಆತನ ಮೇಲೆ ತಪ್ಪು ಹೊರಿಸಬಹುದೆಂದು ಧರ್ಮೋಪದೇಶಕರು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.


ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.


ಆದ್ದರಿಂದ ಅವರು ಆ ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು. ಆ ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು