Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:28 - ಪರಿಶುದ್ದ ಬೈಬಲ್‌

28 ಯೆಹೂದ್ಯನಾಯಕರು ಕೋಪಗೊಂಡು ಆ ಮನುಷ್ಯನನ್ನು ಅಪಹಾಸ್ಯಮಾಡಿ, “ನೀನು ಅವನ (ಯೇಸು) ಹಿಂಬಾಲಕನಾಗಿರುವೆ. ನಾವು ಮೋಶೆಯ ಹಿಂಬಾಲಕರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಅಧಿಕಾರಿಗಳು ಅವನನ್ನು ಶಪಿಸಿದರು. “ನೀನೇ ಅವನ ಶಿಷ್ಯ, ನಾವು ಮೋಶೆಯ ಶಿಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಅವರು ಅವನನ್ನು ಬೈದು - ನೀನು ಆ ಮನುಷ್ಯನ ಶಿಷ್ಯ; ನಾವು ಮೋಶೆಯ ಶಿಷ್ಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಅವರು ಅವನನ್ನು ದೂಷಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತೆನಿ ತೆಕಾ ಅವ್ಮಾನ್ ಕರುನ್, “ತಿಯಾಚ್ ತೊ, ತೆಚೊ ಶಿಸ್, ಅಮಿ ಮೊಯ್ಜೆಚ್ಯಾ ವಾಟೆನ್ ಚಲ್ತಲೆ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:28
12 ತಿಳಿವುಗಳ ಹೋಲಿಕೆ  

“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.


ದಾರಿಯಲ್ಲಿ ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ,


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು