ಯೋಹಾನ 9:3 - ಪರಿಶುದ್ದ ಬೈಬಲ್3 ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ಜೆಜುನ್, “ತೊ ತೆಚ್ಯಾ ಪಾಪಾಕ್ನಿ ಲಾಗುನ್ ಹೊಂವ್ದಿ, ತೆಚ್ಯಾ ಬಾಯ್ - ಬಾಬಾಚ್ಯಾ ಪಾಪಾಕ್ನಿ ಹೊಂವ್ದಿ ಕುಡ್ಡೊ ಹೊವ್ನ್ ಉಪ್ಜುಕ್ನಾ, ದೆವಾಚೊ ಬಳ್ ಕಾಮಾಚ್ಯಾ ರುಪಾತ್ ದಾಕ್ವುನ್ ದಿವ್‍ಸಾಟ್ನಿ ಮನುನ್ ತೊ ಕುಡ್ಡೊ ಹೊವ್ನ್ ಉಪಜ್ಲಾ. ಅಧ್ಯಾಯವನ್ನು ನೋಡಿ |