Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:30 - ಪರಿಶುದ್ದ ಬೈಬಲ್‌

30 ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತ್ಯಾ ಮಾನ್ಸಾನ್, “ವಿಚಿತ್ರ್ ವಿಶಯ್ ಹೆ ತ್ಯಾ ಮಾನ್ಸಾನ್ ಮಾಜೆ ಡೊಳೆ ದಿಸಿ ಸರ್ಕೆ ಕರ್ಲ್ಯಾನ್, ಅನಿ ತೊ ಕೊನ್ ಮನುನ್ ತುಮ್ಕಾ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:30
13 ತಿಳಿವುಗಳ ಹೋಲಿಕೆ  

ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.


ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?


ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು.


ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು